Exodus 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.
Kannada BSI Bible 2016
ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.
Kannada Bible (KNCL) BSI 2016
ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.