Exodus 7:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣೆದುರಿನಲ್ಲಿಯೇ ಸರ್ಪವಾಗುವುದು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.
Kannada BSI Bible 2016
ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ನಿಮಗೆ - ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕೆಂದು ಹೇಳಿದರೆ ಮೋಶೆಯು ಆರೋನನಿಗೆ - ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಬೀಸಾಡು ಎಂದು ಹೇಳಬೇಕು, ಅದು ಸರ್ಪವಾಗುವದು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
\ಫರೋಹನು ನಿಮಗೆ, ‘ನಾನು ನಿಮ್ಮ ಮಾತನ್ನು ನಂಬಬೇಕಾದರೆ ಮಹತ್ಕಾರ್ಯವೊಂದನ್ನು ನನ್ನ ಮುಂದೆ ಮಾಡಿ,’ ಎಂದು ಹೇಳಿದರೆ ಮೋಶೆ ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದ ಮೇಲೆ ಬಿಸಾಡು’ ಎಂದು ಹೇಳಲಿ. ಅದು ಸರ್ಪವಾಗುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಫರೋಹನು ನಿಮಗೆ, ‘ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರಿ,’ ಎಂದಾಗ ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಫರೋಹನ ಮುಂದೆ ಬಿಸಾಡು,’ ಎಂದು ಹೇಳು, ಆಗ ಅದು ಸರ್ಪವಾಗುವುದು,” ಎಂದು ಹೇಳಿದರು.