Exodus 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.
Kannada BSI Bible 2016
ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಫರೋಹನ ಬಳಿಯಿಂದ ಹೊರಟುಹೋದಾಗ ಮೋಶೆ ಯೆಹೋವನಿಗೆ ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಪ್ರಾರ್ಥನೆ ಮಾಡಿಕೊಂಡನು.
Kannada Bible (KNCL) BSI 2016
ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟುಹೋದರು. ಫರೋಹನ ಮೇಲೆ ಬರಮಾಡಿದ್ದ ಕಪ್ಪೆಗಳ ಕಾಟವನ್ನು ತೊಲಗಿಸಬೇಕೆಂದು ಮೋಶೆ ಪ್ರಾರ್ಥನೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ, ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ಕಾಟದ ಬಗ್ಗೆ ಯೆಹೋವ ದೇವರಿಗೆ ಮೊರೆಯಿಟ್ಟನು.