Exodus 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.
Kannada BSI Bible 2016
ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೋಲನ್ನು ಚಾಚಿ ಭೂವಿುಯ ಧೂಳನ್ನು ಹೊಡೆ; ಹೊಡೆಯಲು ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವದು ಎಂದು ಹೇಳು ಅಂದನು.
Kannada Bible (KNCL) BSI 2016
ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು.