Exodus 8:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
Kannada BSI Bible 2016
ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹಾಗೆಯೇ ಮಾಡಿದರು; ಆರೋನನು ಕೋಲನ್ನು ಹಿಡುಕೊಂಡು ಕೈಚಾಚಿ ಭೂವಿುಯ ಧೂಳನ್ನು ಹೊಡೆಯಲು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೇನುಗಳು ಬಂದವು; ಐಗುಪ್ತ ದೇಶದಲ್ಲೆಲ್ಲಾ ಭೂವಿುಯಲ್ಲಿರುವ ಧೂಳು ಹೇನುಗಳಾಯಿತು.
Kannada Bible (KNCL) BSI 2016
ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು