Exodus 8:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಲು ಪ್ರಯತ್ನಿಸಿದರೂ ಧೂಳಿನಿಂದ ಹೇನುಗಳನ್ನು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಹೇನುಗಳು ಪ್ರಾಣಿಗಳ ಮೇಲೂ ಜನರ ಮೇಲೂ ಉಳಿದುಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.
Kannada BSI Bible 2016
ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೋಯಿಸರು ತಮ್ಮ ಗುಪ್ತ ವಿದ್ಯೆಯಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವದಕ್ಕೆ ಪ್ರಯತ್ನ ಮಾಡಿದಾಗ್ಯೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.
Kannada Bible (KNCL) BSI 2016
ಮಾಟಗಾರರು ತಮ್ಮ ತಂತ್ರ ಮಂತ್ರಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಆ ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂತ್ರಗಾರರು ಹೇನುಗಳನ್ನು ಬರಮಾಡುವುದಕ್ಕೆ ತಮ್ಮ ಮಾಟಗಳಿಂದ ಪ್ರಯತ್ನಿಸಿದರು, ಆದರೆ ಸಾಧ್ಯವಾಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.