Exodus 8:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.
Kannada BSI Bible 2016
ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.
Kannada Bible (KNCL) BSI 2016
ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.