Exodus 8:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.
Kannada BSI Bible 2016
ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ.
Kannada Bible (KNCL) BSI 2016
ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.