Exodus 8:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?
Kannada BSI Bible 2016
ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮೋಶೆ - ಹಾಗೆ ಮಾಡುವದು ಯುಕ್ತವಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞದಲ್ಲಿ ಕೊಡುವ ಆಹುತಿ ಐಗುಪ್ತ್ಯರಿಗೆ ನಿಷೇಧ. ನಿಷಿದ್ಧವೆಂದು ಐಗುಪ್ತ್ಯರು ತಿಳುಕೊಂಡಿರುವ ಆಹುತಿಯನ್ನು ನಾವು ಅವರ ಕಣ್ಣಿನ ಮುಂದೆ ಮಾಡಿದರೆ ಅವರು ನಮ್ಮನ್ನು ಕೊಲ್ಲುವದಕ್ಕೆ ಕಲ್ಲೆಸೆಯುವರಲ್ಲವೇ.
Kannada Bible (KNCL) BSI 2016
ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.