Exodus 8:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸುವಂತಾಗಲಿ. ಹೀಗೆ ಮಾಡಲು ಯೆಹೋವನೇ ನಮಗೆ ಹೇಳಿದ್ದಾನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.
Kannada BSI Bible 2016
ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಅರಣ್ಯದಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು ಅಂದನು.
Kannada Bible (KNCL) BSI 2016
ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’.\ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.