Exodus 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆ ಆರೋನರು ಒಲೆಯಿಂದ ಬೂದಿಯನ್ನು ತೆಗೆದುಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡರು. ಅವರು ಬೂದಿಯನ್ನು ಗಾಳಿಯಲ್ಲಿ ತೂರಿದಾಗ ಜನರ ಮೇಲೂ ಪ್ರಾಣಿಗಳ ಮೇಲೂ ಹುಣ್ಣುಗಳಾಗತೊಡಗಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.
Kannada BSI Bible 2016
ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು; ಮೋಶೆಯು ಆ ಬೂದಿಯನ್ನು ಆಕಾಶಕ್ಕೆ ತೂರಲಾಗಿ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹುಣ್ಣಾಗುವ ಬೊಕ್ಕೆಗಳನ್ನೆಬ್ಬಿಸಿತು.
Kannada Bible (KNCL) BSI 2016
ಮೋಶೆ ಮತ್ತು ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು. ಮೋಶೆ ಆ ಬೂದಿಯನ್ನು ಆಕಾಶಕ್ಕೆ ತೂರಿದನು. ಅದು ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು.