Exodus 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯ ಈ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
Kannada BSI Bible 2016
ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಣ್ಣುಗಳು ಜೋಯಿಸರಲ್ಲಿಯೂ ಐಗುಪ್ತ್ಯರೆಲ್ಲರಲ್ಲಿಯೂ ಇದ್ದದರಿಂದ ಆ ಜೋಯಿಸರು ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.
Kannada Bible (KNCL) BSI 2016
ಆ ಹುಣ್ಣುಗಳು ಮಂತ್ರವಾದಿಗಳಲ್ಲೂ ಈಜಿಪ್ಟಿನವರೆಲ್ಲರಲ್ಲೂ ಇದ್ದುದರಿಂದ ಆ ಮಂತ್ರವಾದಿಗಳು ಹುಣ್ಣುಗಳ ನಿಮಿತ್ತ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.