Exodus 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು ಮೋಶೆಗೆ, “ಮುಂಜಾನೆ ಎದ್ದು ಫರೋಹನ ಬಳಿಗೆ ಹೋಗಿ, ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನನ್ನನ್ನು ಆರಾಧಿಸಲು ನನ್ನ ಜನರು ಹೋಗಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
Kannada BSI Bible 2016
ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಹೀಗನ್ನಬೇಕು - ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವದೇನಂದರೆ - ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡಬೇಕು.
Kannada Bible (KNCL) BSI 2016
ಬಳಿಕ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಹೋಗಿ ಫರೋಹನ ಮುಂದೆ ನಿಂತುಕೊಂಡು ಹೀಗೆನ್ನಬೇಕು: ‘ಹಿಬ್ರಿಯರ ದೇವರಾದ ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಅವರು ಆರಾಧಿಸುವ ಹಾಗೆ ನನ್ನ ಜನರನ್ನು ಕಳುಹಿಸು.