Exodus 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.
Kannada BSI Bible 2016
ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು; ಐಗುಪ್ತರಾಜ್ಯವು ಸ್ಥಾಪಿಸಲ್ಪಟ್ಟ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿಲ್ಲ.
Kannada Bible (KNCL) BSI 2016
ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.