Exodus 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ, “ನಿನ್ನ ತೋಳುಗಳನ್ನು ಆಕಾಶದ ಕಡೆಗೆ ಚಾಚು; ಆಗ ಈಜಿಪ್ಟಿನಲ್ಲೆಲ್ಲಾ ಆಲಿಕಲ್ಲಿನ ಮಳೆ ಬೀಳತೊಡಗುವುದು. ಆಲಿಕಲ್ಲಿನ ಮಳೆಯು ಜನರ, ಪ್ರಾಣಿಗಳ ಮತ್ತು ಈಜಿಪ್ಟಿನ ಹೊಲಗಳಲ್ಲಿರುವ ಎಲ್ಲಾ ಸಸ್ಯಗಳ ಮೇಲೆ ಬೀಳುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.
Kannada BSI Bible 2016
ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವದು ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಆಕಾಶದ ಕಡೆಗೆ ನಿನ್ನ ಕೈಚಾಚು. ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಈಜಿಪ್ಟ್ ದೇಶದಲ್ಲಿ ಇರುವ ಎಲ್ಲಾ ಹೊಲದ ಬೆಳೆಯ ಮೇಲೆಯೂ ಆಲಿಕಲ್ಲಿನ ಮಳೆ ಸುರಿಯುವುದು,” ಎಂದು ಪ್ರಕಟಪಡಿಸಿದರು.