Exodus 9:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.
Kannada BSI Bible 2016
ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.