Exodus 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕೈಯೆತ್ತಿ ಹೊಲಗಳಲ್ಲಿರುವ ನಿನ್ನ ಪಶುಗಳನ್ನೂ ನಿನ್ನ ಎಲ್ಲಾ ಕುದುರೆಗಳನ್ನೂ ಕತ್ತೆಗಳನ್ನೂ ಒಂಟೆಗಳನ್ನೂ ದನಕರುಗಳನ್ನೂ ಕುರಿಗಳನ್ನೂ ಘೋರವ್ಯಾದಿಯಿಂದ ಸಾಯಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.
Kannada BSI Bible 2016
ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ ಕುದುರೆ ಕತ್ತೆ ಒಂಟೆ ದನ ಕುರಿ ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯೆತ್ತಿ ಘೋರವ್ಯಾಧಿಯನ್ನುಂಟುಮಾಡುವನೆಂದು ತಿಳುಕೋ.
Kannada Bible (KNCL) BSI 2016
ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು.