Exodus 9:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಫರೋಹನ ಬಳಿಯಿಂದ ಹೊರಟು ಪಟ್ಟಣದಾಚೆಗೆ ಹೋದಾಗ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋದವು; ಮಳೆಯೂ ನಿಂತುಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.
Kannada BSI Bible 2016
ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸಿದಾಗ ಗುಡುಗೂ ಕಲ್ಲಿನ ಮಳೆಯೂ ನಿಂತು ಹೋದವು, ಮಳೆಯು ನಿಂತಿತು.
Kannada Bible (KNCL) BSI 2016
ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.