Exodus 9:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಳೆಯೂ ಆಲಿಕಲ್ಲಿನ ಮಳೆಯೂ ಗುಡುಗೂ ನಿಂತುಹೋದದ್ದನ್ನು ಕಂಡ ಫರೋಹನು ಮತ್ತು ಅವನ ಅಧಿಕಾರಿಗಳು ಮತ್ತೆ ತಮ್ಮ ಹೃದಯಗಳನ್ನು ಕಠಿಣಪಡಿಸಿಕೊಂಡು ಪಾಪ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.
Kannada BSI Bible 2016
ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸಲೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಬಿರುಮಳೆಯೂ ಕಲ್ಲಿನ ಮಳೆಯೂ ಗುಡುಗೂ ನಿಂತು ಹೋದದ್ದನ್ನು ಫರೋಹನು ಕಂಡಾಗ ಅವನೂ ಅವನ ಪರಿವಾರದವರೂ ಇನ್ನೂ ಪಾಪಿಷ್ಠರಾಗಿ ತಮ್ಮ ಹೃದಯಗಳನ್ನು ಮೊಂಡುಮಾಡಿಕೊಂಡರು.
Kannada Bible (KNCL) BSI 2016
ಆದರೆ ಆ ಮಳೆ, ಆ ಕಲ್ಲುಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನು ಹಾಗು ಅವನ ಪರಿವಾರದವರು ತಮ್ಮ ಹೃದಯಗಳನ್ನು ಪುನಃ ಕಠಿಣವಾಗಿಸಿಕೊಂಡು, ಪಾಪ ಕಟ್ಟಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಳೆ, ಆಲಿಕಲ್ಲಿನ ಮಳೆ, ಗುಡುಗುಗಳು ನಿಂತುಹೋದದ್ದನ್ನು ಫರೋಹನು ನೋಡಿದಾಗ, ಅವನು ಪುನಃ ಪಾಪಮಾಡಿದನು. ತನ್ನ ಅಧಿಕಾರಿಗಳ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.