Exodus 9:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಸ್ವತಂತ್ರರಾಗಿ ಹೋಗಲು ಫರೋಹನು ಬಿಡಲಿಲ್ಲ. ಯೆಹೋವನು ಮೋಶೆಯ ಮೂಲಕ ಹೇಳಿಸಿದಂತೆಯೇ ಇದಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.
Kannada BSI Bible 2016
ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸಲೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು; ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ.
Kannada Bible (KNCL) BSI 2016
ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯ ಕಲ್ಲಾಯಿತು, ಇಸ್ರಯೇಲರನ್ನು ಅವನು ಹೋಗಲು ಬಿಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಮೋಶೆಗೆ ಹೇಳಿದಂತೆ, ಅವನು ಇಸ್ರಾಯೇಲರನ್ನು ಕಳುಹಿಸಲೇ ಇಲ್ಲ.