Exodus 9:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಯೆಹೋವನು ಈ ಕಾರ್ಯವನ್ನು ಮಾಡಿದನು. ಈಜಿಪ್ಟಿನ ಹೊಲಗಳಲ್ಲಿದ್ದ ಪಶುಗಳೆಲ್ಲಾ ಸತ್ತುಹೋದವು; ಆದರೆ ಇಸ್ರೇಲರಿಗೆ ಸೇರಿದ ಯಾವ ಪಶುವೂ ಸಾಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.
Kannada BSI Bible 2016
ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾರಣೆಯ ದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸಾಯುತ್ತಾ ಬಂದವು; ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲ.
Kannada Bible (KNCL) BSI 2016
ಮಾರನೆಯ ದಿನವೇ ಸರ್ವೇಶ್ವರ ಈ ಕಾರ್ಯವನ್ನು ನೆರವೇರಿಸಿದರು. ಈಜಿಪ್ಟಿನವರ ಪಶುಪ್ರಾಣಿಗಳೆಲ್ಲಾ ಸಾಯುತ್ತಾ ಬಂದವು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.