Exodus 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
Kannada BSI Bible 2016
ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ವಿಚಾರಿಸಿದಾಗ ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳುಕೊಂಡನು. ಆದಾಗ್ಯೂ ಫರೋಹನ ಹೃದಯವು ಮೊಂಡವಾಗಿದ್ದದರಿಂದ ಆ ಜನರಿಗೆ ಹೊರಡಲಿಕ್ಕೆ ಅಪ್ಪಣೆ ಕೊಡದೆಹೋದನು.
Kannada Bible (KNCL) BSI 2016
ಫರೋಹನು ಆಳುಗಳನ್ನು ಕಳುಹಿಸಿ ವಿಚಾರಿಸಿದನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳಿದುಬಂದಿತು. ಆದರೂ ಕೂಡ ಫರೋಹನ ಹೃದಯ ಕಠಿಣವಾಯಿತು. ಆ ಜನರಿಗೆ ಹೊರಡಲಿಕ್ಕೆ ಅವನು ಅಪ್ಪಣೆ ಕೊಡದೆಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.