Ezekiel 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಘಲಘದಿಯಲ್ಲಿ ಸಿಂಹದ ಮುಖ, ಎಡ ಘದಿಯಲ್ಲಿ ಹೋರಿಯ ಮುಖ, ಹಿಂಘದಿಯಲ್ಲಿ ಗರುಡನ ಮುಖ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.
Kannada BSI Bible 2016
ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಖಗಳು ಎಂಥವುಗಳಂದರೆ ಒಂದೊಂದರ [ಮುಂದಿನ] ಮುಖವು ಮನುಷ್ಯನದು, ಬಲಗಡೆಯ ಮುಖವು ಸಿಂಹನದು, ಎಡಗಡೆಯ ಮುಖವು ಹೋರಿಯದು, [ಹಿಂದಿನ] ಮುಖವು ಗರುಡಪಕ್ಷಿಯದು.
Kannada Bible (KNCL) BSI 2016
ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಮುಖಗಳು ಹೀಗಿದ್ದವು: ಪ್ರತಿಯೊಂದರ ಮುಂದಿನ ನಾಲ್ಕು ಮುಖಗಳು ಮನುಷ್ಯನ ಮುಖದಂತಿತ್ತು; ಬಲಗಡೆಯ ನಾಲ್ಕು ಮುಖಗಳು ಸಿಂಹದ ಮುಖದಂತಿತ್ತು; ಎಡಗಡೆಯ ನಾಲ್ಕು ಮುಖಗಳು ಹೋರಿಯ ಮುಖದಂತಿತ್ತು; ಹಿಂದಿನ ನಾಲ್ಕು ಮುಖಗಳು ಗರುಡಪಕ್ಷಿಯ ಮುಖದಂತಿತ್ತು.