Ezekiel 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
Kannada BSI Bible 2016
ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಮುಖಗಳೂ ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹಕ್ಕೆ ಮರೆಯಾಗಿದ್ದವು.
Kannada Bible (KNCL) BSI 2016
ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.