Ezekiel 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
Kannada BSI Bible 2016
ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜೀವಿಗಳ ಮಧ್ಯದಲ್ಲಿ ಅದ್ಭುತ ಕಾಂತಿಯು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ, ವಿುಂಚುಗಳು, ಹೊರಡುತ್ತಿದ್ದವು.
Kannada Bible (KNCL) BSI 2016
ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.