Ezekiel 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಘಣ್ಣದ ರತಐಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು. (Verses 15-16)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.
Kannada BSI Bible 2016
ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಆ ಜೀವಿಗಳನ್ನು ನೋಡಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕಗಳಲ್ಲಿ ನೆಲಸೋಕುವ ಚಕ್ರಗಳು ಕಾಣಿಸಿದವು.
Kannada Bible (KNCL) BSI 2016
ಇಗೋ, ನಾನು ಆ ಜೀವಿಗಳನ್ನು ನೋಡುತ್ತಿದ್ದಂತೆ ಒಂದೊಂದು ಕಡೆಯಲ್ಲೂ ಆ ಜೀವಿಗಳ ಪಕ್ಕದಲ್ಲಿ ನೆಲಸೋಕುವ ಚಕ್ರಗಳು ಕಾಣಿಸಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಆ ಜೀವಿಗಳನ್ನು ನೋಡಲಾಗಿ, ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖವುಳ್ಳದ್ದಾಗಿರುವುದನ್ನು ನಾನು ನೋಡಿದೆನು.