Ezekiel 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 15
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
Kannada BSI Bible 2016
ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಚಕ್ರಗಳ ವರ್ಣವೂ ರಚನೆಯೂ ಹೇಗಿದ್ದವಂದರೆ - ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು [ಅಡ್ಡವಾಗಿ] ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
Kannada Bible (KNCL) BSI 2016
ಆ ಚಕ್ರಗಳ ವರ್ಣರಚನೆ ಹೇಗಿತ್ತೆಂದರೆ: ಅವುಗಳ ವರ್ಣ ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.