Ezekiel 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.
Kannada BSI Bible 2016
ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳೊಳಗಣ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.
Kannada Bible (KNCL) BSI 2016
ದೇವರಾತ್ಮವು ಸಾಗಿಸಿದ ಕಡೆಗೇ ಅವು ಸಾಗುತ್ತಿದ್ದವು. ಆ ಜೀವಿಗಳಲ್ಲಿದ್ದ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಅವುಗಳು ಹೋದವು. ಚಕ್ರಗಳು ಸಹ ಅವುಗಳಿಗೆದುರಾಗಿ ಮೇಲಕ್ಕೆ ಏಳುತ್ತಿದ್ದವು. ಏಕೆಂದರೆ ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.