Ezekiel 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.
Kannada BSI Bible 2016
ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಮುಂದರಿಯುವಾಗ ಇವೂ ಮುಂದರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.
Kannada Bible (KNCL) BSI 2016
ಆ ಜೀವಿಗಳು ಮುಂದುವರಿಯುವಾಗ ಚಕ್ರಗಳೂ ಮುಂದುವರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಜೀವಿಗಳು ಮುಂದುವರಿಯುವಾಗ, ಚಕ್ರಗಳೂ ಮುಂದುವರಿಯುತ್ತಿದ್ದವು. ಅವು ನಿಂತು ಹೋಗುವಾಗ, ಇವೂ ನಿಂತು ಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ, ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.