Ezekiel 1:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಬೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸಬಚ್ಫವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.
Kannada BSI Bible 2016
ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
Kannada BSI JV (ಕನ್ನಡ ಸತ್ಯವೇದವು J.V. (BSI))
ಭೀಕರವಾದ ಮಂಜುಗಡ್ಡೆಯಂತೆ ಥಳಿಥಳಿಸುವ ಒಂದು ತರದ ನೆಲಗಟ್ಟು ಆ ಜೀವಿಗಳ ತಲೆಯ ಮೇಲ್ಗಡೆ ಹಾಕಿತ್ತು.
Kannada Bible (KNCL) BSI 2016
ಮಂಜುಗಡ್ಡೆಯಂತೆ ಥಳಥಳಿಸುವ ಒಂದು ತೆರೆದ ಆಶ್ಚರ್ಯಕರವಾದ ಗವಿಯಾಕೃತಿ ಆ ಜೀವಿಗಳ ತಲೆಯ ಮೇಲ್ಗಡೆ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಿಯ ತಲೆಗಳ ಮೇಲೆ ಗಗನ ಮಂಡಲ ವಿಶಾಲ ರೂಪವು ವಜ್ರದಂತಿತ್ತು. ಮತ್ತು ಅದು ಅದ್ಭುತವಾಗಿತ್ತು.