Ezekiel 1:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಬೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನ್ನ ಎರಡು ರೆಕ್ಕೆಗಳನ್ನು ಚಾಚಿಕೊಂಡು ಮತ್ತೊಂದು ಜೀವಿಯನ್ನು ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
Kannada BSI Bible 2016
ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕೆಳಗೆ ಜೀವಿಗಳ ರೆಕ್ಕೆಗಳು ಮಟ್ಟಸವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
Kannada Bible (KNCL) BSI 2016
ಅದರ ಕೆಳಗೆ ಆ ಜೀವಿಗಳ ರೆಕ್ಕೆಗಳು ಮಟ್ಟಸವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಗಗನ ಮಂಡಲದ ಕೆಳಗೆ ಆ ಜೀವಿಗಳ ರೆಕ್ಕೆಗಳು ಒಂದರ ಕಡೆಗೆ ಒಂದರಂತೆ ಚಾಚಿದವು. ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.