Ezekiel 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಘ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಘ್ದದಂತಿತ್ತು. ಸರ್ವಶಕ್ತನಾದ ದೇವರ ಶಘ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಘ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾಶಬರ್ಗಳಲ್ಲಿ ಕೆಳಗಿಳಿಸುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
Kannada BSI Bible 2016
ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಮುಂದರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯ ಹಾಗೆ, ಆರ್ಭಟಿಸುವ ಸೈನ್ಯದ ಕೋಲಾಹಲದೋಪಾದಿಯಲ್ಲಿ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು.
Kannada Bible (KNCL) BSI 2016
ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.