Ezekiel 1:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೀವಿಗಳು ಚಲಿಸುವದನ್ನು ನಿಲ್ಲಿಸಿ ರೆಕ್ಕೆಗಳನ್ನು ಕೆಳಗಿಳಿಸಿದವು. ಆಗ ಇನ್ನೊಂದು ದೊಡ್ಡ ಶಘ್ದ ಉಂಟಾಯಿತು. ಅವುಗಳ ತಲೆಗಳ ಮೇಲ್ಗಡೆಯ ಬೋಗುಣಿಯ ಮೇಲಿನಿಂದ ಆ ಶಘ್ದವು ಹೊರಟಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
Kannada BSI Bible 2016
ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು.
Kannada Bible (KNCL) BSI 2016
ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲಿಂದ ಒಂದು ಧ್ವನಿ ನನ್ನ ಕಿವಿಗೆ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳು ನಿಂತು, ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ, ಅವುಗಳ ತಲೆಗಳ ಮೇಲಿರುವ ಗಗನ ಮಂಡಲದೊಳಗಿಂದ ಒಂದು ಶಬ್ದವಾಯಿತು.