Ezekiel 1:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಘಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.
Kannada BSI Bible 2016
ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲೆ ಇಂದ್ರ ನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.
Kannada Bible (KNCL) BSI 2016
ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.