Ezekiel 1:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಆತನ ಸೊಂಟದ ಮೇಲ್ಭಾಗವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.
Kannada BSI Bible 2016
ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಸುತ್ತಿಕೊಂಡಿತ್ತು.
Kannada Bible (KNCL) BSI 2016
ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆ; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆ; ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು.