Ezekiel 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜಬಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನೊಐ ಕಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.
Kannada BSI Bible 2016
ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು.
Kannada Bible (KNCL) BSI 2016
ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.