Ezekiel 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಬೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.
Kannada BSI Bible 2016
ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಕಾಲುಗಳು ನೆಟ್ಟಗಿದ್ದು ಬೆಳಗಿದ ತಾಮ್ರದ ಹಾಗೆ ನಿಗಿನಿಗಿಸುತ್ತಿದ್ದವು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು.
Kannada Bible (KNCL) BSI 2016
ಇವುಗಳ ಕಾಲು ನೆಟ್ಟಗಿದ್ದವು; ಪಾದಗಳು ಕರುವಿನ ಗೊರಸಿನಂತೆ ಇದ್ದವು; ಬೆಳಗಿದ ಕಂಚಿನಂತೆ ಮಿನುಮಿನುಗುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಕಾಲುಗಳು ನೆಟ್ಟಗಿದ್ದು, ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು, ಕಂಚಿಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.