Ezekiel 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.
Kannada BSI Bible 2016
ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದರಿದಾಗೆಲ್ಲ ತಿರುಗಿಕೊಳ್ಳದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.
Kannada Bible (KNCL) BSI 2016
ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಹಿಂತಿರುಗಿ ನೋಡದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ರೆಕ್ಕೆಗಳು ಪರಸ್ಪರರ ರೆಕ್ಕೆಗಳನ್ನು ಸ್ಪರ್ಶಿಸುತ್ತಿದ್ದವು. ಪ್ರತಿಯೊಂದೂ ನೇರವಾಗಿ ಮುಂದೆ ಹೋಗುತ್ತಿದ್ದವು ಮತ್ತು ಅವರು ತಿರುಗದೆ ಮುಂದೆ ಸಾಗುತ್ತಿದ್ದರು.