Ezekiel 10:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.
Kannada BSI Bible 2016
ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು.
Kannada Bible (KNCL) BSI 2016
ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು.