Ezekiel 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
Kannada BSI Bible 2016
ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
Kannada Bible (KNCL) BSI 2016
ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರು ಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಕೆರೂಬಿಗಳು ಹೋದಂತೆ ಚಕ್ರಗಳು ತಿರುಗಲಿಲ್ಲ. ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.