Ezekiel 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಬೆನ್ನಿನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.
Kannada BSI Bible 2016
ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆರೂಬಿಗಳ ಬೆನ್ನು, ಕೈ, ರೆಕ್ಕೆ ಅಂತು ಸರ್ವಾಂಗಗಳಲ್ಲಿಯೂ ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.
Kannada Bible (KNCL) BSI 2016
ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಹಾಗು ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ದೇಹ, ಬೆನ್ನು, ಕೈ, ರೆಕ್ಕೆ ಮತ್ತು ಚಕ್ರಗಳು ಇವೆಲ್ಲವುಗಳ ಸುತ್ತಲೂ ಕಣ್ಣುಗಳಿಂದ ತುಂಬಿದ್ದವು, ಮತ್ತು ಅವನ ಎಲ್ಲಾ ನಾಲ್ಕು ಚಕ್ರಗಳು ಕಣ್ಣುಗಳಿಂದ ತುಂಬಿದ್ದವು.