Ezekiel 10:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನ್ನು ಬದಲಾಯಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು.
Kannada BSI Bible 2016
ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆರೂಬಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದರಿಯುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು.
Kannada Bible (KNCL) BSI 2016
ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.