Ezekiel 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಘಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.
Kannada BSI Bible 2016
ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.
Kannada Bible (KNCL) BSI 2016
ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.