Ezekiel 10:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನ್ನು ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ” ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.
Kannada BSI Bible 2016
ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ ಎಂದು ಅಪ್ಪಣೆಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.
Kannada Bible (KNCL) BSI 2016
ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ, “ಚಕ್ರಗಳ ಮಧ್ಯದಿಂದಲೂ, ಕೆರೂಬಿಯರ ಮಧ್ಯದಿಂದಲೂ ಬೆಂಕಿಯನ್ನು ತೆಗೆದುಕೊಳ್ಳಲು,” ಆಜ್ಞಾಪಿಸಿದನು. ಮನುಷ್ಯನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.