Ezekiel 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆರೂಬಿದೂತರಲ್ಲೊಬ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸಬಲ್ಪವನ್ನು ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.
Kannada BSI Bible 2016
ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಒಂದು ಕೆರೂಬಿಯು ಕೆರೂಬಿಗಳ ನಡುವೆ ಕೈಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.
Kannada Bible (KNCL) BSI 2016
ಆಗ ಒಬ್ಬ ಕೆರೂಬಿಯು ಇತರ ಕೆರೂಬಿಯರ ನಡುವೆ ಕೈಚಾಚಿ, ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು, ನಾರಿನ ಬಟ್ಟೆತೊಟ್ಟವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಬೆಂಕಿಗೆ ಚಾಚಿ, ಸ್ವಲ್ಪ ತೆಗೆದುಕೊಂಡು ನಾರುಮಡಿಯನ್ನು ಧರಿಸಿಕೊಂಡಿದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.