Ezekiel 11:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”
Kannada BSI Bible 2016
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ ನನ್ನ ನಿಯಮಗಳನ್ನು ಅನುಸರಿಸದೆ ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವದು.
Kannada Bible (KNCL) BSI 2016
ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”