Ezekiel 11:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ದೇವರ ಪರವಾಗಿ ಮಾತನಾಡುವದನ್ನು ನಿಲ್ಲಿಸಿದ ಕೂಡಲೇ, ಬೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಘಗ್ಗಿ, “ನನ್ನ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನ್ನು ಸಂಪೂರ್ಣವಾಗಿ ನಾಶಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.
Kannada BSI Bible 2016
ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡು - ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ ಎಂದು ಮೊರೆಯಿಟ್ಟೆನು.
Kannada Bible (KNCL) BSI 2016
ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.