Ezekiel 11:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನ್ನ ಸಹೋದರರ, ನಿನ್ನ ಸಬಂತ ಸಂಬಂಧಿಕರ ಮತ್ತು ಇಡೀ ಇಸ್ರೇಲ್ ವಂಶದವರ ಬಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸಬಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.
Kannada BSI Bible 2016
ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇವಿುನವರು ಇಸ್ರಾಯೇಲ್ ವಂಶದವರಲ್ಲಿ ಯಾರಯಾರನ್ನು - ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವಾಸ್ತ್ಯವಾಗಿ ಸಿಕ್ಕಿದೆ ಎಂದು ಹೀನೈಸಿದರೋ ಅವರೆಲ್ಲರೂ ಉಳಿದಿದ್ದಾರಲ್ಲಾ.
Kannada Bible (KNCL) BSI 2016
“ನರಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣತಮ್ಮಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಯೇಲ್ ವಂಶದ ಎಲ್ಲರಿಗೆ, ಜೆರುಸಲೇಮಿನಲ್ಲೇ ಉಳಿದಿರುವವರು, ‘ಸರ್ವೇಶ್ವರನ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಾಯೇಲ್ ವಂಶದ ಎಲ್ಲರಿಗೆ, ಯೆರೂಸಲೇಮಿನಲ್ಲೇ ಉಳಿದಿರುವವರು, ‘ಯೆಹೋವ ದೇವರ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೇ?