Ezekiel 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’
Kannada BSI Bible 2016
ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್‌ ದೇಶವನ್ನು ನಿಮಗೆ ಕೊಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.
Kannada Bible (KNCL) BSI 2016
“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’