Ezekiel 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಙೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”